ರಾಮರಕ್ಷಾ ಸ್ತೋತ್ರದ ಕಾವ್ಯಸೌಂದರ್ಯ
ಸಾಂಪ್ರದಾಯಕ ರಕ್ಷಾಸ್ತೋತ್ರಗಳಲ್ಲಿ ‘ರಾಮರಕ್ಷಾ ಸ್ತೋತ್ರ’ವು ಅನೇಕ ಭಕ್ತರು ಪಠಿಸುತ್ತಿರುವ ಮಹತ್ವದ ಸ್ತೋತ್ರವಾಗಿದೆ. ಬುಧಕೌಶಿಕ ಋಷಿಗಳು ಈ ಸ್ತೋತ್ರದ ದೃಷ್ಟಾರರು. (ತನ್ನ ಕನಸಿನಲ್ಲಿ ಭಗವಾನ್ ಶಂಕರನು ತನಗೆ ಈ ಸ್ತೋತ್ರವನ್ನು ನೀಡಿದನು ಎಂದು ಬುಧಕೌಶಿಕ ಋಷಿಗಳು ಹೇಳಿದ್ದಾರೆ.) ಅವರ ಈ ರಚನೆಯಲ್ಲಿಯ ಮುಖ್ಯ ಭಾಗವನ್ನು, ಸಾಹಿತ್ಯದ ದೃಷ್ಟಿಯಿಂದ ಗಮನಿಸೋಣ. ಆ ಭಾಗ ಹೀಗಿದೆ: ಶಿರೋಮೇ ರಾಘವಃ ಪಾತು ಭಾಲಂ ದಶರಥಾತ್ಮಜಃ ಕೌಸಲ್ಯೇಯೋ ದೃಶೌ ಪಾತು ವಿಶ್ವಾಮಿತ್ರಪ್ರಿಯ: ಶ್ರುತಿ: ಘ್ರಾಣಂ ಪಾತು ಮಖತ್ರಾತಾ ಮುಖಂ ಸೌಮಿತ್ರಿವತ್ಸಲಃ ಜಿಹ್ವಾ ವಿದ್ಯಾನಿಧಿಃ ಪಾತು ಕಂಠಂ ಭರತವಂದಿತಃ ಸ್ಕಂಧೌ ದಿವ್ಯಾಯುಧಃ ಪಾತು ಭುಜೌ ಭಗ್ನೇಶಕಾರ್ಮುಕ: ಕರೌ ಸೀತಾಪತಿಃ ಪಾತು ಹೃದಯಂ ಜಾಮದಗ್ನ್ಯಜಿತ್ ಮಧ್ಯಂ ಪಾತು ಖರಧ್ವಂಸೀ ನಾಭಿಂ ಜಾಂಬವದಾಶ್ರಯಃ ಸುಗ್ರೀವೇಶಃ ಕಟೀ ಪಾತು ಸಕ್ಥಿನೀ ಹನುಮತ್ಪ್ರಭುಃ ಉರೂ ರಘೂತ್ತಮಃ ಪಾತು ರಕ್ಷಃಕುಲವಿನಾಶಕೃತ್ ಜಾನುನೀ ಸೇತುಕೃತ್ಪಾತು ಜಂಘೇ ದಶಮುಖಾಂತಕ: ಪಾದೌ ವಿಭೀಷಣಶ್ರೀದಃ ಪಾತು ರಾಮೋsಖಿಲಂ ವಪು: ಈ ಸ್ತೋತ್ರದಲ್ಲಿ ತನ್ನ ಶರೀರದ ವಿವಿಧ ಬಾಗಗಳನ್ನು ಶ್ರೀ ರಾಮಚಂದ್ರನು ರಕ್ಷಿಸಲಿ ಎಂದು ಪ್ರಾರ್ಥಿಸಲಾಗಿದೆ. ಮೊದಲಿಗೆ ಪ್ರಾರಂಭವಾಗುವದು ಶಿರಸ್ಸು, ತನ್ನಂತರ ಹಣೆ, ಕಣ್ಣುಗಳು, ಕಿವಿಗಳು. ಇದೇ ರೀತಿಯಾಗಿ ಪಾದಗಳವರೆಗ...