ಮಣ್ಣೆತ್ತಿನ ಅಮವಾಸ್ಯೆ

#ಮಣ್ಣೆತ್ತಿನ_ಅಮವಾಸ್ಯೆ : ಮಳೆ ಬೆಳೆ ಚೆನ್ನಾಗಿ ಆಗಲೆಂದು ಕೃಷಿಕರು ಬೇಡಿಕೊಳ್ಳುವ ಹಬ್ಬ.

ಉತ್ತರ ಕರ್ನಾಟಕದಲ್ಲಿ ಜ್ಯೇಷ್ಠ ಬಹುಳ ಅಮವಾಸ್ಯೆಗೆ ಮಣ್ಣೆತ್ತಿನ ಅಮವಾಸ್ಯೆ ಎಂದು ಕರೆಯುತ್ತಾರೆ. ಹಳ್ಳಿಯ ಹೆಣ್ಣು ಮಕ್ಕಳು ಅರಳೆಲೆ ಬಸವನನ್ನು ಎಲೆಯ ಮಂಟಪದಲ್ಲಿ ಸಿಂಗಾರ ಮಾಡಿ ಪೂಜೆ ಮಾಡಿ ಹಾಡು ಹೇಳುತ್ತಾರೆ. ಕನ್ನಡದ  ಜಾನಪದ ಸಂಶೋಧನಾ ಪ್ರಬಂಧಕಾರ ಬಾದಾಮಿ ತಾಲೂಕು ಕೆರೂರಿನ ಡಾ.ಬಿ,ಎಸ್,ಗದ್ದಗಿಮಠರು ಸಂಗ್ರಹಿಸಿದ ಹೆಣ್ಣು ಮಕ್ಕಳು ಹಾಡುವ ಅರಳೆಲೆ ಬಸವನ ಪದ ಹೀಗಿದೆ.

ಒಂದು ಸುತ್ತಿನ ಕ್ವಾಟಿ
ಅದರೊಳು ಹೊಂದಿ ನಿಂತನು ಬಸವ
ಬಸವಕ ಬಸವೆನ್ನಿರೆ
ಬಸವನ ಪಾದಕ ಶರಣನ್ನಿರೆ

ಎರಡು ಸುತ್ತಿನ ಕ್ವಾಟಿ
ಅದರೊಳು ಸೊಡರು ತೂಗುವ ಬಸವ
ಬಸವಕ ಬಸವೆನ್ನಿರೆ
ಬಸವನ ಪಾದಕ ಶರಣನ್ನಿರೆ

ಮೂರು ಸುತ್ತಿನ ಕ್ವಾಟಿ
ಅದರೊಳು ಮೂರ್ತಗೊಂಡನ ಬಸವ
ಬಸವಕ ಬಸವೆನ್ನಿರೆ
ಬಸವನ ಪಾದಕ ಶರಣನ್ನಿರೆ

ನಾಲ್ಕು ಸುತ್ತಿನ ಕ್ವಾಟಿ
ಅದರೊಳು ನ್ಯಾಯಮೂರ್ತಿಯು ಬಸವ
ಬಸವಕ ಬಸವೆನ್ನಿರೆ
ಬಸವನ ಪಾದಕ ಶರಣನ್ನಿರೆ

ಐದು ಸುತ್ತಿನ ಕ್ವಾಟಿ
ಅದರೊಳು ಐಕ್ಯಮೂರ್ತಿಯು ಬಸವ
ಬಸವಕ ಬಸವೆನ್ನಿರೆ
ಬಸವನ ಪಾದಕ ಶರಣನ್ನಿರೆ

ಆರು ಸುತ್ತಿನ ಕ್ವಾಟಿ
ಅದರೊಳು ಅರಳಿ ನಿಂತಾನ ಬಸವ
ಬಸವಕ ಬಸವೆನ್ನಿರೆ
ಬಸವನ ಪಾದಕ ಶರಣನ್ನಿರೆ

ಏಳು ಸುತ್ತಿನ ಕ್ವಾಟಿ
ಅದರೊಳು ಜಗವನಾಳುವ ಬಸವ
ಬಸವಕ ಬಸವೆನ್ನಿರೆ
ಬಸವನ ಪಾದಕ ಶರಣನ್ನಿರೆ

ಎಂಟು ಸುತ್ತಿನ ಕ್ವಾಟಿ
ಶಿವನಿಗೆ ಕಂಟಲೆತ್ತೇನೋ ಬಸವ
ಬಸವಕ ಬಸವೆನ್ನಿರೆ
ಬಸವನ ಪಾದಕ ಶರಣನ್ನಿರೆ

ಒಂಭತ್ತು ಸುತ್ತಿನ ಕ್ವಾಟಿ
ಅದರೊಳು ತುಂಬಿ ಬಂದಾನೊ ಬಸವ
ಬಸವಕ ಬಸವೆನ್ನಿರೆ
ಬಸವನ ಪಾದಕ ಶರಣನ್ನಿರೆ

ಹತ್ತು ಸುತ್ತಿನ ಕ್ವಾಟಿ
ಅದರೊಳು ಸುತ್ತ ನೋಡಲು ಬಸವ
ಬಸವಕ ಬಸವೆನ್ನಿರೆ
ಬಸವನ ಪಾದಕ ಶರಣನ್ನಿರೆ
ಹೀಗೆ ಹಾಡಿ ಬಸವನ ಪೂಜೆ ನೆರವೇರಿಸುತ್ತಾರೆ.

Comments

Popular posts from this blog

'ಓಂ ಗಂ ಗಣಪತಯೇ ನಮಃ'

ಶ್ರೀಮದ್ವೇಂಕಟೇಶ ಮಹಾತ್ಮೇ ಶ್ರೀ ವೇಂಕಟೇಶ ಸ್ತೋತ್ರಂ

ಆದಿ ಶಂಕರರ ಸ್ತೋತ್ರ ಸಾಹಿತ್ಯ