ಕಾರ್ತಿಕ ಮಾಸದ ಮಹತ್ವ
ಕಾರ್ತಿಕ ಮಾಸ ಹಬ್ಬಗಳ ಪರ್ವವಷ್ಟೇ ಅಲ್ಲ, ಜ್ಯೋತಿ ಬೆಳಗುವ, ಮನದಲ್ಲಿರುವ ಅಂಧಕಾರವನ್ನು ದೂರ ಮಾಡುವ ಪರ್ವವೂ ಆಗಿದೆ. ಅದರ ಸಂಕೇತವಾಗಿ ಮನೆಯ ಮುಂದೆ ದೀಪ ಬೆಳಗುತ್ತಾರೆ.
ಕಾರ್ತಿಕ ಮಾಸವು ದೀಪಾವಳಿಯ ನಂತರ ಶುರುವಾಗುತ್ತದೆ. ಕಾರ್ತಿಕ ಪೌರ್ಣಮಿಯಂದು ಚಂದ್ರನ ಬೆಳಕು ಎಂದಿಗಿಂತಲೂ ಪ್ರಕಾಶಮಾನವಾಗಿರುತ್ತದೆ. ಕಾರಣ, ಚಂದ್ರನು ಭೂಮಿಯ ಸಮೀಪದಲ್ಲಿರುತ್ತಾನೆ. ಹಾಗಾಗಿ ಎಂದಿಗಿಂತಲೂ ಶೇ. 7ರಷ್ಟು ಹೆಚ್ಚು ಸೂರ್ಯನ ಬೆಳಕನ್ನು ಚಂದ್ರನು ಪ್ರತಿಫಲಿಸುತ್ತಾನೆ.
ಕಾರ್ತಿಕ ಮಾಸದ ವಿಶೇಷ
ಸೂರ್ಯನು ದ್ವಾದಶ ರಾಶಿಗಳಲ್ಲಿ ಸಂಚರಿಸುತ್ತಾನೆ. ಪ್ರತಿಯೊಂದು ರಾಶಿಯಲ್ಲಿ ಸಂಚರಿಸುವಾಗ ತನ್ನದೇ ಆದ ಪ್ರಭಾವವನ್ನು ಪ್ರತ್ಯೇಕವಾಗಿ ಬೀರುತ್ತಾನೆ. ಅದರ ಪ್ರಭಾವವು ಭೂಮಿಯ, ಭೂಮಿಯ ಪರಿಸರ ಹಾಗೂ ವ್ಯಕ್ತಿಯ ಮೇಲಾಗುತ್ತದೆ. ಕಾರ್ತಿಕ ಮಾಸವು ಮನುಷ್ಯ ಮತ್ತು ದೇವರ ನಡುವಿನ ಸೂಕ್ಷ್ಮ ಪ್ರಜ್ಞೆಯ ಸೇತುವಾಗಿದೆ.
ಇಂತಹ ಸಾಧನೆಯ ಮಾರ್ಗದತ್ತ ಸಾಗಲು ನಮ್ಮ ಋಷಿ ಮುನಿಗಳು ಕೆಲವೊಂದು ಧಾರ್ಮಿಕ ವಿಧಿ, ವಿಧಾನಗಳನ್ನು ಉಲ್ಲೇಖಿಸಿದ್ದಾರೆ. ಅಂತಹ ಋಷಿ ಮುನಿಗಳಲ್ಲಿ ವಸಿಷ್ಠ ಋಷಿಗಳು ಕೆಲವೊಂದು ವಿಧಾನಗಳನ್ನು ಸೂಚಿಸಿದ್ದಾರೆ. ಅದನ್ನು ಅನುಸರಿಸುವ ಮೂಲಕ ನಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆಗಳನ್ನು ಕಂಡುಕೊಳ್ಳಬಹುದು.
ಹೀಗೆ ವಸಿಷ್ಠರಿಂದ ವಿಧಿತವಾದ ಐದು ವಿಧಾನಗಳೆಂದರೆ,
1. ಪವಿತ್ರ ಸ್ನಾನ
ಕಾರ್ತಿಕ ಮಾಸದಲ್ಲಿ ಪ್ರತಿನಿತ್ಯ ಮೂರು ಬಾರಿ ಸ್ನಾನ ಮಾಡುವ ಸಂಪ್ರದಾಯ ಕೆಲವರಲ್ಲಿದೆ. ಸ್ನಾನ ಮಾಡುವುದರಿಂದ, ಭೌತಿಕವಾಗಿ ದೇಹದ ಕಲ್ಮಷಗಳನ್ನು ತೊಳೆದುಕೊಳ್ಳಬಹುದು. ಅದರೊಂದಿಗೆ ಮನಸ್ಸಿನ ಕಲ್ಮಷಗಳನ್ನು ಕಳೆದುಕೊಳ್ಳುವುದರೊಂದಿಗೆ, ನಮ್ಮ ಭಾವನೆಗಳನ್ನು , ಮನಸ್ಸಿನ ಕೋಪ, ತಾಪವನ್ನು ನಿಯಂತ್ರಿಸಿಕೊಳ್ಳಬಹುದು. ನದಿ ತೀರಗಳಲ್ಲಿ ಮಾಡುವ ಜಲ ಸ್ನಾನವು ಜಲ ಚಿಕಿತ್ಸೆಗೆ ಪೂರಕವಾಗಿದೆ. ಪವಿತ್ರ ಸ್ನಾನ ಮಾಡುವುದರಿಂದ ದೇಹ ಹಾಗೂ ಮನಸು ಎರಡು ಶುದ್ಧವಾಗುತ್ತದೆ.
ದೀಪಾರಾಧನೆ
ಪವಿತ್ರ ಸ್ನಾನಾನಂತರ, ದೀಪಗಳನ್ನು ಮನೆಯ ಅಂಗಳದಲ್ಲಿ ಮತ್ತು ಮನೆಯ ಸುತ್ತಮುತ್ತ ಬೆಳಗಬೇಕೆಂಬ ನಿಯಮವಿದೆ. ಶಿವ ಮತ್ತು ವಿಷ್ಣು ಮಂದಿರಗಳಲ್ಲಿ ಸೂರ್ಯೋದಯಕ್ಕೆ ಮುನ್ನ ಮತ್ತು ಸೂರ್ಯೋದಯಕ್ಕೆ ನಂತರ ಭಗವಂತನ ಪ್ರೀತ್ಯರ್ಥವಾಗಿ ಜ್ಯೋತಿಯನ್ನು ಬೆಳಗುತ್ತಾರೆ. ತುಪ್ಪದ ದೀಪವನ್ನು ಬೆಳಗುವುದರಿಂದ ಅಸುರೀ ಶಕ್ತಿಗಳು ನಾಶವಾಗುತ್ತವೆ, ಕ್ರಿಮಿ, ಕೀಟಗಳಿಂದ ಪರಿಸರ ಶುದ್ಧವಾಗುತ್ತವೆ. ಅದರೊಂದಿಗೆ ಮನಸ್ಸಿನ ಅಜ್ಞಾನವು ಕಳೆಯುತ್ತದೆ. ಹೀಗೆ ಮನೆಯಲ್ಲಿ ದೀಪ ಬೆಳಗುವುದರಿಂದ. ಐಶ್ವರ್ಯ, ಸಂಪತ್ತು, ಆರೋಗ್ಯ ಸ್ಥಿರವಾಗುತ್ತದೆ.ಪವಿತ್ರ ಗಿಡದ ಪೂಜೆ
ದೀಪವನ್ನು ಬೆಳಗಿ ಮನದೊಳಗಿನ ಅಜ್ಞಾನವನ್ನು ಕಳೆದುಕೊಂಡ ನಂತರ ತುಳಸಿ ದೇವಿಯ ಪೂಜೆಗೆ ಮುಂದಾಗುತ್ತೇವೆ. ತುಳಸಿ ಒಂದು ಗಿಡಮೂಲಿಕಾ ಸಸ್ಯವಷ್ಟೇ ಅಲ್ಲ, ವಾತಾವರಣದಲ್ಲಿ ಆಮ್ಲಜನಕವನ್ನು ಹೆಚ್ಚಿಸುವ ಶಕ್ತಿಯಾಗಿದೆ. ತುಳಸಿ ಪೂಜೆಯನ್ನು ಪ್ರತಿನಿತ್ಯ ಮಾಡುವ ಮಹಿಳೆಯರಿಗೆ ಸೌಭಾಗ್ಯ ಸಿದ್ಧಿಸುತ್ತದೆರ ಎನ್ನಲಾಗಿದೆ. ತುಳಸಿ ಗಿಡದ ಮುಂದೆ ದೀಪಾರಾಧನೆ ಮಾಡುವುದು ತ್ಯಾಗದ ಸಂಕೇತವಾಗಿದೆ.ದಾಮೋದರನ ಪೂಜೆ
ಶಿವ ಮತ್ತು ವಿಷ್ಣುವಿನ ಆರಾಧನೆಯೊಂದಿಗೆ ಶಿವ ಮತ್ತು ವಿಷ್ಣು ಎರಡೂ ಒಂದೇ ಎನ್ನುವ ಭಾವ ಮೂಡುತ್ತದೆ. ಶಿವ ಪ್ರಜ್ಞೆಯ ಸಂಕೇತವಾದರೆ, ವಿಷ್ಣುವು ಸ್ಥಿತಿಕಾರನಾಗಿದ್ದಾನೆ. ಹೇಗೆ ಬ್ರಹ್ಮಾಂಡವು ಸ್ಥಿತಿ ಮತ್ತು ಪ್ರಜ್ಞೆಯಿಂದ ಆವೃತ್ತವಾಗಿದೆಯೋ ಹಾಗೆಯೇ ಶಿವ ಮತ್ತು ವಿಷ್ಣುವಿನ ಪ್ರಜ್ಞೆಯು ನಮ್ಮಲ್ಲಿ ಅಡಕವಾಗಿದೆ. ಇಂತಹ ಪ್ರಜ್ಞೆಯೇ ನಮ್ಮನ್ನು ಅಧ್ಯಾತ್ಮ ಸಾಧನೆಯತ್ತ ಮುನ್ನಡೆಸುತ್ತದೆ.ಸೋಮವಾರ ವಿಶೇಷ
ಸೋಮವಾರ ಶಿವನಿಗೆ ಪ್ರಿಯವಾದ ವಾರ. ಸೋಮವಾರದ ಅಧಿಪತಿ ಚಂದ್ರ. ಚಂದ್ರ ಮನೋಕಾರಕ ಅಂದರೆ ಮನಸ್ಸಿನ ಮೇಲೆ ಹಿಡಿತವನ್ನು ಸಾಧಿಸುವವ. ಯಾರು ತಮ್ಮ ಮನಸ್ಸನನ್ನು ನಿಗ್ರಹದಲ್ಲಿ ಇಟ್ಟುಕೊಳ್ಳುತ್ತಾರೋ ಅಂತಹ ವ್ಯಕ್ತಿಗಳು ಉನ್ನತ ಸ್ಥಾನಕ್ಕೆ ಏರುತ್ತಾರೆ. ಅದರೊಂದಿಗೆ ತಮ್ಮ ವ್ಯಕ್ತಿತ್ವ ಬೆಳವಣಿಗೆಗೂ ಪೂರಕವಾಗುತ್ತಾರೆ. ಸಿದ್ಧಿಯನ್ನು ಪಡೆಯುತ್ತಾರೆ. ಹಾಗಾಗಿ ಯಾರು ಸೋಮವಾರದಂದು ಪ್ರದೋಷ ವ್ರತವನ್ನು ಆಚರಿಸುತ್ತಾರೋ, ಮನೋಕಾರಕ ಚಂದ್ರನನ್ನೇ ತನ್ನ ಶಿರದಲ್ಲಿ ಧಾರಣೆ ಮಾಡಿಕೊಂಡಿರುವ ಶಿವನನ್ನು ಕುರಿತು ಧ್ಯಾನ ಮಾಡುತ್ತಾರೋ, ಅವರು ಅತ್ಯುತ್ತ ಮ ಜ್ಞಾನವಂತರಾಗುತ್ತಾರೆ.
Comments
Post a Comment