Posts

Showing posts from December, 2017

ಮೂವತ್ತು ಭಾವಗೀತೆಗಳ ಪುಷ್ಪಮಾಲೆ

Image
ತೂಮಣಿ ಮಾಡುತ್ತು ಚುಟ್ರುಮ್ ವಿಳಕ್ಕೆರಿಯ ದೂಪಮ್ ಕಮಳ್ ತ್ತುಯಿಲಣೈ ಮೇಲ್ ಕಣ್ವಳರುಮ್ ಮಾಮಾನ್ ಮಗಳೇ ಮಣಿಕ್ಕದವಂ ತಾಳ್ ತೆರುವಾಯ್ ಮಾಮಿರ್ ಅವಳೈ ಎಳುಪ್ಪೀರೋ, ಉನ್ ಮಗಳ್ ತಾನ್ ಊಮೆಯೋ ಅನ್ರಿ ಚ್ಯೆವುಡೋ ಅನನ್ದಲೋ ಏಮಪ್ಪೆರುನ್ದುಯಿಲ್ ಮನ್ದಿರಪ್ಪಟ್ಟಾಳೋ ಮಾಮಾಯನ್ ಮಾದವನ್ ವೈಗುನ್ದ ನೆನ್ನೆನ್ರು ನಾಮಮ್ ಪಲವುಮ್ ನವಿನ್ರೇಲೋ ರೆಮ್ಬಾವಾಯ್     ಎಂತಹ ಸುಂದರವಾದ ವರ್ಣನೆ. ಒಳಗೆ ಮಾನವ ಮಗಳು ನಿದ್ರಿಸುತ್ತಿದ್ದಾಳೆ. ಆ ಗೃಹವಾದರೋ ಪರಿಶುದ್ಧವಾದ ಮಾಣಿಕ್ಯದಿಂದ ಕಟ್ಟಲ್ಪಟ್ಟಿದೆ. ಸುತ್ತಲೂ ದೀಪಗಳು ಉರಿಯುತ್ತಿವೆ. ಅಗರು, ಹಾಲು ಮಡ್ಡಿ ಮುಂತಾದ ಧೂಫ ಘಮಘಮಿಸುತ್ತಿದೆ. ಅವಳು ಹಂಸತೂಲಿಕಾಕಲ್ಪದಲ್ಲಿ ಮಲಗಿ ನಿದ್ರಿಸುತ್ತಿದ್ದಾಳೆ. ಹೊರಗಿನಿಂದ ಬಾಲೆಯರು ಅವಳನ್ನು ಎಬ್ಬಿಸುತ್ತಿದ್ದಾರೆ. "ಏಳು, ಮಾವನ ಮಗಳೇ, ಚಿಲಕವನ್ನು ತೆಗೆಯುವವಳಾಗು." ಉಹುಂ, ಶ್ರೀ ಕೃಷ್ಣಾನುಭಾವದ ರಸದಲ್ಲಿ ತಲ್ಲಿನಳಾಗಿರುವ ಅವಳು ಏಳುವುದಿಲ್ಲ. ಆಗ ಬಾಲೆಯರು ಅವಳ ತಾಯಿಗೆ ಹೇಳುತ್ತಾರೆ. 'ಅತ್ತೆಯವರೆ ನೀವಾದರೂ ಅವಳನ್ನು ಎಬ್ಬಿಸಿ. ಅವಳೇನು ಮೂಕಿಯೋ, ಕಿವುಡಿಯೋ ಅಥವಾ ಸೋಮಾರಿಯೋ ಕೇಳಿ ಯಾರಾದರೂ ಇವಳಿಗೆ ಮಂಕುಬೂದಿ ಚೆಲ್ಲಿದ್ದಾರೇನು? ಮಂತ್ರ ಮಗ್ಧಳನ್ನಾಗಿ ಮಾಡಿದ್ದಾರೇನು? ಅಥವಾ ಇವಳ ನೆರೆಮನೆಯಲ್ಲೇ ಶ್ರೀಕೃಷ್ಣನಿರುವುದರಿಂದ ರಾತ್ರಿಯೆಲ್ಲಾ, ಅವನು ಇವಳೊಡನಿದ್ದು ಈಗ ತಾನೇ ಎದ್ದು ಹೋಗಿರಬಹುದಾದ್ದರಿಂದ ಈಕೆ ಇನ್ನೂ ಅದೇ ತನ್ಮಯತೆಯಲ್ಲಿದ್ದಾಳೋ...